spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, September 28, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜಕೀಯಕ್ಕೆ ಗುಡ್ ಬೈ ಹೇಳಿದ ಬಿಜೆಪಿ ಸಂಸದ ಬಾಬುಲ್ ಸುಪ್ರಿಯೋ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಸಂಸದ ಬಾಬುಲ್ ಸುಪ್ರಿಯೋ ಅವರು ರಾಜಕೀಯದಿಂದ ದೂರ ಸರಿಯಲು ನಿರ್ಧರಿಸಿದ್ದಾರೆ. ಇಂದು ತಮ್ಮ ಫೇಸ್​ಬುಕ್​ ಖಾತೆಯಲ್ಲಿ ‘ಅಲ್ವಿದಾ’ ಹೇಳಿರುವ ಸುಪ್ರಿಯೊ, ತಮ್ಮ ಲೋಕಸಭಾ ಸದಸ್ಯತ್ವಕ್ಕೆ ರಾಜಿನಾಮೆ ಕೊಡುವುದಾಗಿ ಬರೆದಿದ್ದಾರೆ.
ಬಂಗಾಳಿಯಲ್ಲಿ ಕಾವ್ಯಮಯವಾಗಿ ಬರೆದಿರುವ ಸುದೀರ್ಘ ಸಂದೇಶದಲ್ಲಿ ಕಲಾವಿದರೂ ಆಗಿರುವ ಸುಪ್ರಿಯೋ, ‘ಸಾಮಾಜಿಕ ಕಾರ್ಯ ಮಾಡುವುದಕ್ಕೆ ರಾಜಕೀಯದಲ್ಲಿರುವ ಅಗತ್ಯವಿಲ್ಲ’ ಎಂದಿದ್ದಾರೆ.
ಇತ್ತೀಚೆಗೆ, ಸಂಪುಟ ಪುನರ್​ರಚನೆಯಾದಾಗ ಮಂತ್ರಿಗಿರಿ ಕಳೆದುಕೊಂಡ ಸುಪ್ರಿಯೊ, ತಮಗೆ ಯಾವುದೋ ಸ್ಥಾನ ಬೇಕು ಎಂದು ಈ ರೀತಿ ಮಾಡುತ್ತಿಲ್ಲ, ತಪ್ಪು ತಿಳಿದುಕೊಳ್ಳಬೇಡಿ ಎಂದಿದ್ದಾರೆ.
ರಾಜಕೀಯ ತೊರೆಯಬೇಕು ಎಂದು ಕಳೆದ ಕೆಲವು ದಿನಗಳಲ್ಲಿ ತೀರ್ಮಾನಿಸಿದ್ದೇನೆ. ನನಗೆ ಹಲವು ರೀತಿಯಲ್ಲಿ ಪ್ರೇರಣೆಯಾಗಿರುವ ಅಮಿತ್​ ಶಾ ಮತ್ತು ನಡ್ಡಾ ಅವರಿಗೆ ಧನ್ಯವಾದಗಳು ಎಂದು ಸುಪ್ರಿಯೋ ಹೇಳಿದ್ದಾರೆ.
ಈ ಪೋಸ್ಟ್​ನಲ್ಲಿ 2014ರ ಮತ್ತು 2019ರ ತಮ್ಮ ಚುನಾವಣೆಯ ಸಂದರ್ಭ, ಬಂಗಾಳದಲ್ಲಿ ಬಿಜೆಪಿ ಸೋಲಿನ ಪರಿಸ್ಥಿತಿಯ ಬಗ್ಗೆ ಕೂಡ ಉಲ್ಲೇಖಿಸಿದ್ದಾರೆ. ಜೊತೆಗೆ ತಮ್ಮ ಕ್ಷೇತ್ರವಾದ ಬಂಗಾಳದ ಅಸನ್ಸೊಲ್ ಜನತೆಗೆ ಧನ್ಯವಾದ ಸೂಚಿಸಿದ್ದಾರೆ.
ಬಾಬುಲ್ ಸುಪ್ರಿಯೋ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ 2014ರಿಂದ 2016ರ ಜುಲೈವರೆಗೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಯ ರಾಜ್ಯ ಖಾತೆ ಸಚಿವರಾಗಿದ್ದು, 2016ರಿಂದ 2019ರವರೆಗೆ ಭಾರೀ ಕೈಗಾರಿಕೆ ರಾಜ್ಯ ಖಾತೆ ಸಚಿವರಾಗಿದ್ದರು.
https://www.facebook.com/BabulSupriyoOfficial/posts/4344085975634177

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss