ಮಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವರುಣನ ಆರ್ಭಟ ಹೆಚ್ಚುತ್ತಲೇ ಹೋಗುತ್ತಿದ್ದು, ಹೊಸಕೆರೆಹಳ್ಳಿ ಏರಿಯಾ ಸಂಪೂರ್ಣ ಜಲಾವೃತಗೊಂಡು ಕೆರೆಯ ಸ್ವರೂಪ ತಾಳಿದೆ.
ಶುಕ್ರವಾರ ಸಂಜೆಯಿಂದ ಶುರುವಾದ ಮಳೆ ತೀವ್ರತೆ ಪಡೆಯುತ್ತಲೇ ಹೋಗುತ್ತಿದ್ದು, ಹೊಸಕೆರೆಹಳ್ಳಿಯ ದತ್ತಾತ್ರೇಯ ಲೇಔಟ್, ಗುರುದತ್ತ ಲೇಔಟ್ ಜಲಾವೃತಗೊಂಡಿರುವ ಹಿನ್ನೆಲೆಯಲ್ಲಿ ತಗ್ಗುಪ್ರದೇಶದಲ್ಲಿರುವ ನಾಗರಿಕರನ್ನು ಸುರಕ್ಷಿತ ಸ್ಥಳಕ್ಕೆ ತಲುಪಿಸಲು NDRF ತಂಡ ಸಮರೋಪಾದಿಯ ಕಾರ್ಯಾಚರಣೆಯಲ್ಲಿ ತೊಡಗಿದೆ. ಕ್ಷಣದಿಂದ ಕ್ಷಣಕ್ಕೆ ಮಳೆ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಆಟೋ, ಕಾರು ಸೇರಿದಂತೆ ಇನ್ನಿತರ ವಾಹನಗಳು ನೀರಿನಲ್ಲಿ ಕೊಚ್ಚಿ ಹೋಗತೊಡಗಿವೆ. ಇಲ್ಲಿನ ಮುಖ್ಯ ರಸ್ತೆಗಳು ಕೂಡಾ ಜಲಾವೃತವಾಗಿದ್ದು, ಮೆಟ್ರೋ ಕಾಮಗಾರಿಗೆ ಹಾಕಿದ್ದ ಬ್ಯಾರಿಕೇಡ್ಗಳು ರಸ್ತೆಗೆ ಬಿದ್ದಿವೆ.ನಗರದ ಜೆ.ಸಿ.ರಸ್ತೆಯಲ್ಲಿದ್ದ ಕೆಲ ವಾಹನಗಳೂ ಸಹ ನೀರಿನಲ್ಲಿ ಮುಳುಗಿದ್ದು, ಚರಂಡಿ ವ್ಯವಸ್ಥಿತವಾಗಿಲ್ಲದ ಕಾರಣ ಮೋರಿ ನೀರೆಲ್ಲವೂ ರಸ್ತೆಯಲ್ಲಿ ಬ್ಲಾಕ್ ಆಗಿವೆ.
ರಾಜಾಜಿನಗರ, ವಿಜಯನಗರ, ಯಶವಂತಪುರ, ಪೀಣ್ಯ, ಶಾಂತಿನಗರ, ಮೆಜೆಸ್ಟಿಕ್, ಗಾಂಧಿನಗರ, ಬಸವನಗುಡಿ, ಆರ್.ಟಿ.ನಗರ, ಹೆಬ್ಬಾಳ, ಮಡಿವಾಳ, ಹೊಸಕೆರೆಹಳ್ಳಿ, ರಾಜರಾಜೇಶ್ವರಿ ನಗರ, ಕೆಂಗೇರಿ ಹಾಗೂ ಸುತ್ತಮುತ್ತ ಪ್ರದೇಶಗಳೂ ಮಳೆ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಕೋಡಿ ಬಿದ್ದ ಲಾಲ್ ಬಾಗ್ ಕೆರೆ