ಹೊಸ ದಿಗಂತ ಆನ್ಲೈನ್ ಡೆಸ್ಕ್:
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುಂಡಿನ ಸದ್ದು ಕೇಳಿಸಿದ್ದು, ರೌಡಿಶೀಟರ್ ಓರ್ವನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ.
ಬರೋಬ್ಬರಿ 23 ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಟೋರಿಯಸ್ ರೌಡಿ ಮಂಜ ಅಲಿಯಾಸ್ ಬೊಂಡ ಮಂಜ ಬಂಧಿತ.
ಕಳೆದ ಒಂದು ತಿಂಗಳಿನಿಂದ ಈತನ ಪತ್ತೆಗಾಗಿ ಸಿಸಿಬಿ ಪೊಲೀಸರು ಬಲೆ ಬೀಸಿದ್ದರು. ಕೋಣನಕುಂಟೆಯಲ್ಲಿ ಆರೋಪಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಆರೋಪಿ ಮಂಜ ಮುಖ್ಯ ಪೇದೆ ನಾಗರಾಜ್ ಗೆ ಡ್ರ್ಯಾಗರ್ ನಿಂದ ಹಲ್ಲೆ ನಡೆಸಿದ್ದಾನೆ. ಪೊಲೀಸರು ಆತ್ಮರಕ್ಷಣೆಗಾಗಿ ಪೊಲೀಸರು ಮಂಜನ ಕಾಲಿಗೆ ಗುಂಡು ಹಾರಿಸಿ ಆತನನ್ನು ಬಂಧಿಸಿದ್ದಾರೆ.