ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ನಂತರ ಇದೀಗ ರಾಜಸ್ಥಾನದ ಭರತ್ಪುರ ಜಿಲ್ಲೆಯಲ್ಲಿ ವಿಷಪೂರಿತ ಮದ್ಯ ಸೇವಿಸಿ 7 ಜನರು ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಗುರವಾರ ಬೆಳಿಗ್ಗೆ ಭರತಪುರ್ ಜಿಲ್ಲೆಯ ರೂಪವಾಸ್ ಪ್ರದೇಶದ ಚಕ್ ಸಮ್ರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವಿಷಪೂರಿತ ಮದ್ಯ ಸೇವಿಸಿ ಅಸ್ವಸ್ಥರಾದವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. ಅಕ್ರಮವಾಗಿ ಮದ್ಯ ಮಾರಾಟ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಹೇಶ್ ಜೋಶಿ ಸೂಚನೆ ನೀಡಿದ್ದಾರೆ.