ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಗುರುವಾರ ರಾತ್ರಿ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಭೂಕಂಪನ ಸಂಭವಿಸಿದ್ದು, ಇದರ ಪರಿಣಾಮವೆಂಬಂತೆ ರಾಜಧಾನಿ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ ಎಂದು ಎನ್ಸಿಎಸ್ ತಿಳಿಸಿದೆ.
ಗುರುವಾರ ರಾತ್ರಿ11.46ಕ್ಕೆ ಸರಿಯಾಗಿ ಐದು ಕಿಲೋ ಮೀಟರ್ ಆಳದಲ್ಲಿ ರಿಕ್ಟರ್ ಮಾಪಕದಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದ್ದು, ಭೂಕಂಪದ ಕೇಂದ್ರ ಬಿಂದು ರಾಜಸ್ಥಾನದ ಅಲ್ವಾರ್ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಖಚಿತಪಡಿಸಿದೆ.
ಭೂಕಂಪನದಿಂದ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂಬುದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ.