ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………
ಹೊಸ ದಿಗಂತ ಆನ್ ಡೆಸ್ಕ್:
ರಾಜೀನಾಮೆ ಘೋಷಣೆಗೂ ಮುನ್ನ ಬಿ.ಎಸ್.ಯಡಿಯೂರಪ್ಪ ಟೋಕಿಯೋ ಒಲಂಪಿಕ್ಸ್ ನಲ್ಲಿ ಪದಕಗಳಿಸುವ ಕರ್ನಾಟಕದ ಕ್ರೀಡಾಪಟುಗಳಿಗೆ ಸಹಾಯಧನ ಘೋಷಿಸಿದ್ದಾರೆ.
ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ಚಿನ್ನದ ಪದಕ ಗೆದ್ದವರಿಗೆ 5 ಕೋಟಿ ರೂ, ಬೆಳ್ಳಿ ಪದಕ ಗೆದ್ದವರಿಗೆ 3 ಕೋಟಿ ರೂ, ಕಂಚಿನ ಪದಕ ಗೆದ್ದವರಿಗೆ 2 ಕೋಟಿ ರೂ, ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಅಷ್ಟೇ ಅಲ್ಲ ಪದಕ ಗೆದ್ದ ಇತರೆ ರಾಜ್ಯದ ಕ್ರೀಡಾ ಪಟುಗಳಿಗೂ ಸಹ ಸಹಾಯಧನ ಘೋಷಿಸಿದ್ದಾರೆ. ಚಿನ್ನದ ಪದಕ ಗೆದ್ದವರಿಗೆ 15 ಲಕ್ಷ ರೂ., ಬೆಳ್ಳಿ ಪದಕ ಗೆದ್ದವರಿಗೆ 10 ಲಕ್ಷ ರೂ., ಕಂಚಿನ ಪದಕ ಗೆದ್ದವರಿಗೆ 5 ಲಕ್ಷ ರೂ. ನೀಡುವುದಾಗಿ ಘೋಷಣೆ ಮಾಡಿದ್ದಾರೆ.