Tuesday, June 28, 2022

Latest Posts

ರಾಜ್ಯಕ್ಕೆ ಕೊರೋನಾ ವೈರಸ್ ಭೀತಿಯಿಲ್ಲ: ವದಂತಿಕೋರರಿಗೆ ಸರ್ಕಾರ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿದ್ದ 273 ಕೊರೋನಾ ಶಂಕಿತರಲ್ಲಿ 253 ಮಂದಿ ವರದಿ ನೆಗೆಟಿವ್ ಆಗಿದ್ದು, ಉಳಿದವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ  ಕೊರೋನಾ ವೈರಸ್ ಸೋಂಕು ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಸಾರ್ವಜನಿಕರಿಗೆ ಈ ಸೋಂಕು ಕುರಿತು ಯಾವುದೇ ಅನುಮಾನಗಳಿದ್ದಲ್ಲಿ 104 ಸಹಾಯವಾಣಿಗೆ ಕರೆ ಮಾಡಬಹುದು ಎಂದರು.

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಈಗಾಗಲೇ 42,283 ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಅವರ ನಿರ್ದೇಶನದಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಯಾರಿಗೂ ಕೊರೋನಾ ಹರಡದಂತೆ ಅಧಿಕಾರಿಗಳು ಕ್ರಮ ತೆಗೆದುಕೊಂಡಿದ್ದಾರೆ ಎಂದರು.

ರಾಜೀವ್ ಗಾಂಧಿ ಆರೋಗ್ಯ ಕೇಂದ್ರದಲ್ಲಿ 5 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರಲ್ಲಿ ಇಬ್ಬರಿಗೆ ನೆಗೆಟಿವ್ ವರದಿ ಬಂದಿದೆ. ಉಳಿದ 3 ಮಂದಿಯ ರಕ್ತ ಮಾದರಿಯ ವರದಿ ಬರಬೇಕಿದೆ. ಕೊರೋನಾ ವೈರಾಣು ಬಾಧಿತರ ಬಗ್ಗೆ ನಿತ್ಯ ಸಂಜೆ 6ಕ್ಕೆ ಮಾಹಿತಿ ನೀಡಲಾಗುತ್ತದೆ. ಇದು ತುಂಬಾ ಸೂಕ್ಷ್ಮ ವಿಚಾರ ಆಗಿರುವುದರಿಂದ ನಮ್ಮ ಬಳಿ ಮಾತ್ರ ಈ ಬಗ್ಗೆ ಮಾಹಿತಿ ನೀಡುತ್ತೇವೆ ಎಂದರು.

ಭಾರತದ ನಮಸ್ತೆ ಪಾಲಿಸಿ: ಇಸ್ರೇಲ್ ಕೊರೋನಾ ಸೋಂಕು ತಡೆಯುವ ದಿಸೆಯಲ್ಲಿ ಯಾರೂ ಹಸ್ತಲಾಘವ ಮಾಡಬಾರದು. ಬದಲಿಗೆ ಭಾರತೀಯ ಸಂಸ್ಕೃತಿಯಾದ ನಮಸ್ತೆ ಮಾಡಿ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಮ್ಮ ದೇಶದ ಜನರಿಗೆ ಕರೆ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss