Wednesday, June 29, 2022

Latest Posts

ರಾಜ್ಯಕ್ಕೆ ವಿಶೇಷ ಅನುದಾನ ನೀಡಿ: ಸಿಎಂ ಮನವಿ

ತುಮಕೂರು: ಭೀಕರ ಮಳೆ ಮತ್ತು ಪ್ರವಾಹದಿಂದ ರಾಜ್ಯದಲ್ಲಿ ಹೆಚ್ಚು ನಷ್ಟ ಉಂಟಾಗಿದ್ದು, 50 ಸಾವಿರ ಕೋಟಿ ರೂ. ವಿಶೇಷ ಅನುದಾನ ನೀಡಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದಲ್ಲಿ ತುಮಕೂರಿನಲ್ಲಿ ನಡೆದ ಪ್ರಗತಿಪರ ರೈತರಿಗೆ ರಾಷ್ಟ್ರ ಮಟ್ಟದ ಕೃಷಿ ಸಮ್ಮಾನ್ ಯೋಜನೆ ಅನುಷ್ಠಾನ ಹಾಗೂ ಕೃಷಿ ಕರ್ಮಣ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿಗೆ ಸಿಎಂ ಮನವಿ ಮಾಡಿದರು.

ಕಳೆದ ಬಾರಿ ಉಂಟಾದಂತಹ ಪ್ರಕೃತಿ ವಿಕೋಪದಿಂದಾಗಿ ರಾಜ್ಯದಲ್ಲಿ 30 ಸಾವಿರ ಕೋಟಿಗೂ ಅಧಿಕ ನಷ್ಟ ಉಂಟಾಗಿದೆ. ಈ ಬಗ್ಗೆ ಹಲವು ಬಾರಿ ಮೋದಿ ಅವರನ್ನು ಭೇಟಿಯಾಗಿ ಮನವಿ ಮಾಡಲಾಗಿದೆ. ರಾಜ್ಯಕ್ಕೆ 50 ಸಾವಿರ ಕೋಟಿ ರೂ. ವಿಶೇಷ ಅನುದಾನ ನೀಡಬೇಕೆಂದು ಮನವಿ ಮಾಡಿಕೊಂಡರು.

2022ರೊಳಗೆ ರಾಜ್ಯದಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ಗುರಿ ಇದೆ. ನದಿ ಜೋಡಣೆಯಂತಹ ಯೋಜನೆ ಜಾರಿಗೊಳಿಸಲು ಕೇಂದ್ರ ಸರ್ಕಾರ ಮುಂದಾಗಬೇಕು. ಅಲ್ಲದೇ, ನೀರಾವರಿ ಯೋಜನೆ ಪೂರ್ಣಗೊಳಿಸಲು ಕೇಂದ್ರ ಸರ್ಕಾರ ನೆರವು ನೀಡಬೇಕು ಎಂದು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss