ಬೆಂಗಳೂರು: ಹೊಸದಿಲ್ಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೆರೆಹಾನಿ ಪರಿಹಾರಕ್ಕೆ ಹೆಚ್ಚಿನ ಅನುದಾನ ಮಂಜೂರು ಮಾಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ಗೆ ಮನವಿ ಮಾಡಿದ್ದಾರೆ.
ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ ಬಿ.ಎಸ್.ಯಡಿಯೂರಪ್ಪ, ರಾಜ್ಯದಲ್ಲಿ ಅನುಷ್ಠಾನಗೊಳ್ಳುತ್ತಿರುವ ಯೋಜನೆಗಳು, ಯೋಜನೆಗಳ ಅನುಷ್ಠಾನಕ್ಕೆ ಅನುದಾನ ಲಭ್ಯತೆ, ಪ್ರವಾಹದಿಂದ ಆಗಿರುವ ಹಾನಿ, ಪರಿಹಾರ ಕಾಮಗಾರಿಗಳ ವಿವರವನ್ನು ವಿವರಿಸಿ ರಾಜ್ಯಕ್ಕೆ ಅನುದಾನ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ವಿಜಯಬಾಸ್ಕರ್ ಉಪಸ್ಥಿತರಿದ್ದರು.
ಇನ್ನು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಪ್ರಸಕ್ತ ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು ಮಹತ್ವದ ಚರ್ಚೆ ನಡೆಸಿದರು. ಈ ವೇಳೆ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಶಂಕರ್ ಗೌಡ ಪಾಟೀಲ್ ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.