Sunday, August 14, 2022

Latest Posts

ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದ ಸೋನಿಯಾ ಗಾಂಧಿ: ಕೇಂದ್ರ ಸರ್ಕಾರದ ವಿರುದ್ಧ ಕಿಡಿ

ಹೊಸದಿಲ್ಲಿ: ಇಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೀಟ್ ಪರೀಕ್ಷೆಯ ವೇಳಾಪಟ್ಟಿ, ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರ ಮತ್ತು ಇತರ ಕೆಲವು ವಿಷಯಗಳ ಬಗ್ಗೆ ಚರ್ಚಿಸಿಸಲು ವಿಡಿಯೂ ಕಾನ್ಫರೆನ್ಸ್ ಮೂಲಕ ಮುಖ್ಯ ಮಂತ್ರಿಗಳ ಸಭೆ  ನಡೆಸಿದರು.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಜಾರ್ಖಂಡ್‌ನ ಹೇಮಂತ್ ಸೊರೆನ್ ಮತ್ತು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಸೇರಿದಂತೆ ಏಳು ಮುಖ್ಯಮಂತ್ರಿಗಳೊಂದಿಗೆ ಮಧ್ಯಂತರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಭೆ ನಡೆಸಿದರು.

ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಮತ್ತು ರಾಜಸ್ಥಾನದ ಅಶೋಕ್ ಗೆಹ್ಲೋಟ್, ಚತ್ತೀಸ್‌ಗಢ ದ ಭೂಪೇಶ್ ಬಾಗೆಲ್ ಮತ್ತು ಪುದುಚೇರಿಯ ವಿ ನಾರಾಯಣಸಾಮಿ ಸೇರಿದಂತೆ ನಾಲ್ವರು ಕಾಂಗ್ರೆಸ್ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಜಿಎಸ್ಟಿ ಯಲ್ಲಿ ರಾಜ್ಯಗಳಿಗೆ ಪರಿಹಾರ ನೀಡಲು ನರೇಂದ್ರ ಮೋದಿ ಸರ್ಕಾರ ನಿರಾಕರಿಸುವುದು ಎಂದು ಗಾಂಧಿ ಹೇಳಿದರು.

ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ಸೋನಿಯಾ ಗಾಂಧಿ ಎನ್ವಿರಾನ್ಮೆಂಟ್ ಇಂಪ್ಯಾಕ್ಟ್ ಅಸೆಸ್ಮೆಂಟ್ (ಇಐಎ) ಡ್ರಾಫ್ಟ್ ಅನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಇದು ಪ್ರಜಾಪ್ರಭುತ್ವ ವಿರೋಧಿ ಮತ್ತು ಪರಿಸರ ಮತ್ತು ಸಾರ್ವಜನಿಕ ಆರೋಗ್ಯ ರಕ್ಷಿಸುವ ಉದ್ದೇಶದಿಂದ ಮೋದಿ ಸರ್ಕಾರ ದುರ್ಬಲಗೊಳಿಸುತ್ತಿದೆ ಎಂದು ಗಾಂಧಿ ಹೇಳಿದರು.

ಕಾಂಗ್ರೆಸ್ ಅಧ್ಯಕ್ಷರು ಪ್ರತಿಪಕ್ಷಗಳು ಒಗ್ಗೂಡಿ ಕೇಂದ್ರ ಸರ್ಕಾರದ ವಿರುದ್ಧ ಹೋರಾಡಬೇಕೆಂದು ಕರೆ ನೀಡಿದರು. ತಮ್ಮ ದೃಷ್ಟಿಕೋನವನ್ನು ಮುಂದಿಟ್ಟು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್, ಆಡಳಿತ ಪಕ್ಷವು (ಬಿಜೆಪಿ) ಪ್ರತಿಪಕ್ಷಗಳ ವಿರುದ್ಧ ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಫೆಡರಲ್ ರಚನೆಯನ್ನು ದುರ್ಬಲಗೊಳಿಸುತ್ತಿದೆ ಎಂದು ಅಭಿಪ್ರಾಯಪಟ್ಟಿದೆ.

ಪ್ರತಿಪಕ್ಷ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ನಾವು ಈಗಿನ ಕೇಂದ್ರ ಸರ್ಕಾರದ ವಿರುದ್ಧ ಹೋರಾಡಬೇಕೇ ಅಥವಾ ಭಯಪಡಬೇಕೇ ಎಂದು ನಿರ್ಧರಿಸಬೇಕು. ಈ ಸಮಯದಲ್ಲಿ ಶಾಳೆಗಳು ತೆರೆಯುವುದು ಸೂಕ್ತವಲ್ಲಿ ಅಮೆರಿಕದಲ್ಲಿ ಶಾಳೆಗಳು ಪ್ರಾರಂಭಿಸಿದ ಬಳಿಕ 97 ಸಾವಿರ ಮಕ್ಕಳಿಗೆ ಕೊರೋನಾ ಸೋಂಕು ತಗುಲಿದೆ. ಭಾರತದಲ್ಲೂ ಅಂತಹ ಪರಿಸ್ಥಿತಿ ಎದುರಾದರೆ ಹೇಗೆ? ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss