ಮಂಗಳೂರು: ರಾಜ್ಯದಲ್ಲಿಂದು 2,756 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,32,396ಕ್ಕೆ ಏರಿಕೆ ಆಗಿದೆ.
ಇತ್ತ ಸೋಂಕಿಗೆ 26 ಮಂದಿ ಮೃತರಾಗಿದ್ದು, ಸಾವಿನ ಸಂಖ್ಯೆ 11,247ಕ್ಕೆ ಏರಿಕೆಯಾಗಿದೆ. ಇಂದು 7140 ಸೋಂಕಿತರು ಗುಣಮುಖರಾಗಿದ್ದು, 7,80,735 ಜನರು ಡಿಸ್ಜಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳು ಸದ್ಯ 40,395 ಇದ್ದು, 932 ಸೋಂಕಿತರು ತೀವ್ರ ನಿಗಾ ಘಟಕದಲ್ಲಿ ಇದ್ದಾರೆ. ಕಳೆದ 7 ದಿನಗಳಿಂದ 54,475 ಮಂದಿ ಹೋಂ ಐಸೋಲೇಷನ್ನಲ್ಲಿ ಇದ್ದಾರೆ. ರಾಜ್ಯದಲ್ಲಿ ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ 2.91ರಷ್ಟು ಇದ್ದು, ಸೋಂಕಿನಿಂದ ಮೃತಪಟ್ಟವರ ಪ್ರಮಾಣ ಶೇ. 0.94ರಷ್ಟಿದೆ.