ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಇಂದಿನಿಂದ ಬೆಂಗಳೂರು ಸೇರಿದಂತೆ ರಾಜ್ಯದ 19 ಜಿಲ್ಲೆಗಳಲ್ಲಿ ಅನ್ ಲಾಕ್ ಆಗಿದ್ದು, ಉಳಿಕ 11 ಜಿಲ್ಲೆಗಳಲ್ಲಿ ಜೂ. 21ರವರೆಗೆ ಲಾಕ್ ಡೌನ್ ಮುಂದುವರೆಯಲಿದೆ.
ಅನ್ ಲಾಕ್ ಗೊಂಡಿರುವ ಜಿಲ್ಲೆಗಳಲ್ಲಿ ಕೆಲ ವಿನಾಯಿತಿಗಳೊಂದಿಗೆ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಪ್ರತಿದಿನ ರಾತ್ರಿ 7 ಗಂಟೆಯಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಹಾಗೂ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರಲಿದ್ದು, ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮೇಲೆ ನಿರ್ಬಂಧ ಹೇರಲಾಗಿದೆ.
ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ ಹೆಚ್ಚಾಗಿರುವ ಕೊಡಗು, ಬೆಳಗಾವಿ, ಮಂಡ್ಯ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಜೂ.21ರವರೆಗೆ ಲಾಕ್ ಡೌನ್ ಮುಂದುವರೆಯಲಿದೆ.
ಏನಿರುತ್ತೆ ಏನಿರಲ್ಲ?
- ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆವರೆಗೆ ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಲಾಗಿದೆ.
- ಕಾರ್ಖಾನೆಗಳಲ್ಲಿ ಶೇ.50ರಷ್ಟು ಸಿಬ್ಬಂದಿ ಹಾಜರಿರಲು ಅವಕಾಶ.
- ಮಧ್ಯಾಹ್ನ 2ರವರೆಗೆ ಮದ್ಯದಂಗಡಿ ಓಪನ್
- ಗಾರ್ಮೆಂಟ್ಸ್ ಶೇ.30ರಷ್ಟು ಸಿಬ್ಬಂದಿಗೆ ಮಾತ್ರ ಅವಕಾಶ
- ಕಟ್ಟಡ ನಿರ್ಮಾಣ ಕಾರ್ಯಕ್ಕೆ ಅವಕಾಶ
- ಪಾರ್ಕ್ ಗಳು ಬೆಳಗ್ಗೆ 5-10ರವರೆಗೆ ಓಪನ್
- ಟೋ, ಟ್ಯಾಕ್ಸಿ ಸಂಚಾರಕ್ಕೆ ಅನುಮತಿ, ಕೇವಲ ಇಬ್ಬರು ಪ್ರಯಾಣಿಕರಿಗೆ ಮಾತ್ರ ಅನುಮತಿ
- ಜಿಮ್, ಈಜುಕೊಳ, ಸಾರ್ವಜನಿಕ ಸಾರಿಗೆ ವ್ಯವಸ್ಥೆ ಬಂದ್.
- ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಮುಂದುವರೆದಿದೆ.