Friday, July 1, 2022

Latest Posts

ರಾಜ್ಯದಲ್ಲಿ ಇಂದು ಇಳಿಕೆಯಲ್ಲಿ ದಾಖಲೆ ಕಂಡ ಕೊರೋನಾ ಸೋಂಕಿನ ಪ್ರಮಾಣ

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಕೊರೋನಾ ರೂಪಾಂತರ ಭೀತಿ ನಡುವೆಯೂ ಸೋಂಕಿನ ಪ್ರಮಾಣ ಇಳಿಮುಖವಾಗುತ್ತಿದ್ದು, ಜನರಲ್ಲಿ ಸ್ವಲ್ಪ ಪ್ರಮಾಣದಲ್ಲಿ ಆತಂಕ ದೂರವಾಗಿದೆ.
ಇಂದು ರಾಜ್ಯದಲ್ಲಿ 653 ಜನರಿಗೆ ಹೊಸದಾಗಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,16,909 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 1178 ಜನ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 8,92,273 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ೨೪ ಗಂಟೆಗಳಲ್ಲಿ ರಾಜ್ಯದಲ್ಲಿ ಸೋಂಕಿಗೆ 8 ಮಂದಿ ಸೋಂಕಿತರ ಮೃತಪಟ್ಟಿದ್ದು, ಇದುವರೆಗೆ 12,070 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 12,547 ಸಕ್ರಿಯ ಪ್ರಕರಣಗಳಿದ್ದು, 205 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss