ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 8960 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,18,752ಕ್ಕೇರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಶುಕ್ರವಾರ ಒಂದೇ ದಿನ ಬರೋಬ್ಬರಿ 136 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5368ಕ್ಕೆ ಏರಿಕೆಯಾಗಿದೆ.
7,464 ಮಂದಿ ಗುಣಮುಖರಾಗಿದ್ದು ಈವರೆಗೆ 2,27,018 ಮಂದಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ 86,347 ಸೋಂಕಿತರಲ್ಲಿ 754 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.