Tuesday, June 28, 2022

Latest Posts

ರಾಜ್ಯದಲ್ಲಿ ಇಂದು ಬರೋಬ್ಬರಿ 9540 ಮಂದಿಗೆ ಪಾಸಿಟಿವ್ , 128 ಮಂದಿ ಬಲಿ, 6860 ಮಂದಿ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು ಬುಧವಾರ ಬರೋಬ್ಬರಿ 9540 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 4,21,730ಕ್ಕೆ ಏರಿಕೆಯಾಗಿದೆ.
ಇನ್ನು ರಾಜ್ಯದಲ್ಲಿ ಇಂದು 128 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 6808ಕ್ಕೆ ಏರಿಕೆಯಾಗಿದೆ.
ಇಂದು 6860 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 3,15,433ಕ್ಕೆ ಏರಿಕೆಯಾಗಿದೆ. 99,470 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 776 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss