Saturday, February 24, 2024

ರಾಜ್ಯದಲ್ಲಿ ಇಂದು 12 ಸಾವಿರ ಮಂದಿಗೆ ಕೊರೋನಾ ದೃಢ, ಪಾಸಿಟಿವಿಟಿ ದರ 6.33%

ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಭಾನುವಾರ 12 ಸಾವಿರ ಪ್ರಕರಣಗಳು ದೃಢಪಟ್ಟಿವೆ. ರಾಜ್ಯದಲ್ಲಿ 49,602 ಸಕ್ರಿಯ ಪ್ರಕರಣಗಳಿವೆ.
ರಾಜ್ಯದಲ್ಲಿ ಒಟ್ಟು 4 ಮಂದಿ ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ದರ 6.33% ಇದ್ದು, ಇಂದು 901 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ.
ಬೆಂಗಳೂರಿನಲ್ಲಿ ಇಂದು 9,020 ಹೊಸ ಪ್ರಕರಣಗಳು ಕಂಡು ಬಂದಿದ್ದು, ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ 40 ಸಾವಿರಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿದ್ದು, ಇಂದು 1,89,499 ಮಂದಿಗೆ ಪರೀಕ್ಷೆಗಳನ್ನು ನಡೆಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!