Sunday, August 14, 2022

Latest Posts

ರಾಜ್ಯದಲ್ಲಿ ಇಂದು 2362 ಕೋವಿಡ್ ಸೋಂಕು ಪ್ರಕರಣ: 4215 ಮಂದಿ ರೋಗಮುಕ್ತ!

ಹೊಸದಿಗಂತ ಆನ್‌ಲೈನ್ ಡೆಸ್ಕ್:

ರಾಜ್ಯದಲ್ಲಿ ಕೊರೋನೋ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಜೊತೆಗೆ ಗುಣಮುಖರಾದವರ ಸಂಖ್ಯೆಯಲ್ಲಿಯೂ ಏರಿಕೆಯಾಗಿದೆ.
ಮಂಗಳವಾರ ರಾಜ್ಯದಲ್ಲಿ  2362 ಹೊಸ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆಯ ಅಂಕಿ 151212 ಕ್ಕೆ ಜಿಗಿದಿದೆ. ಬೆಂಗಳೂರಿನಲ್ಲಿ ಇಂದು ಹೊಸದಾಗಿ 1176 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. 4215ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 31063 ಸಕ್ರಿಯ ಕೊರೋನಾ ಪ್ರಕರಣಗಳಿವೆ.
ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಕೊರೋನಾಗೆ 8 ಮಂದಿ ಸಾವನ್ನಪ್ಪಿದ್ದಾರೆ. ಇಂದು ಕೊರೋನಾಗೆ ಬಲಿಯಾದವರ ಸಂಖ್ಯೆ20. ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 11430 ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss