ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಇಂದು 415 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,43,627 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 322 ಮಂದಿ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,25,489 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇವತ್ತು ಮೂವರು ಮೃತಪಟ್ಟಿದ್ದು, ಇದುವರೆಗೆ 12,244 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 5875 ಸಕ್ರಿಯ ಪ್ರಕರಣಗಳು ಇವೆ.141 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.