Saturday, July 2, 2022

Latest Posts

ರಾಜ್ಯದಲ್ಲಿ ಇಂದು 4,169 ಹೊಸ ಕೊರೋನಾ ಕೇಸ್ ಗಳು, 1263 ಮಂದಿ ಗುಣಮುಖ, ಬರೋಬ್ಬರಿ 104 ಮಂದಿ ಬಲಿ,

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕೇಸ್​ಗಳು ಹೆಚ್ಚುತ್ತಿರುವ ಹಿನ್ನೆಲೆ ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಲಾಕ್​ಡೌನ್ ಘೋಷಿಸಲಾಗಿದೆ. ಆದರೂ ಕೊರೋನಾ ಸೋಂಕಿತರ ಸಂಖ್ಯೆ ಮಾತ್ರ ಏರಿಕೆಯಾಗುತ್ತಲೇ ಇದೆ. ರಾಜ್ಯದಲ್ಲಿ ಇಂದು 4,169 ಹೊಸ ಕೊರೋನಾ ಕೇಸ್ ಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 51,422ಕ್ಕೆ ಏರಿಕೆಯಾಗಿವೆ.
ರಾಜ್ಯದಲ್ಲಿ  ಗುರುವಾರ ಒಂದೇ ದಿನ ಬರೋಬ್ಬರಿ 104 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1032ಕ್ಕೆ ಏರಿಕೆಯಾಗಿದೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2344 ಪ್ರಕರಣಗಳು ವರದಿಯಾಗಿದ್ದು, ಇನ್ನುಳಿದಂತೆ ದಕ್ಷಿಣ ಕನ್ನಡ 238, ಧಾರವಾಡ 176, ವಿಜಯಪುರ 144, ಮೈಸೂರು 130, ಕಲಬುರಗಿ 123, ಉಡುಪಿ 113, ರಾಯಚೂರು 101, ಬೆಳಗಾವಿ 92, ಉತ್ತರ ಕನ್ನಡ 79, ಚಿಕ್ಕಬಳ್ಳಾಪುರ 77, ಬೀದರ್ 53, ಶಿವಮೊಗ್ಗ 46, ಬಳ್ಳಾರಿ 44, ಗದಗ 44, ಕೋಲಾರ 43, ಬಾಗಲಕೋಟೆ 39, ಯಾದಗಿರಿ 34, ಕೊಪ್ಪಳ 32, ಹಾಸನ 31, ಬೆಂಗಳೂರು ಗ್ರಾಮಾಂತರ 31, ಚಿಕ್ಕಮಗಳೂರು 30, ಚಿತ್ರದುರ್ಗ 21, ಹಾವೇರಿ 18, ಕೊಡಗು 18, ಚಾಮರಾಜನಗರ 16, ತುಮಕೂರು 12, ಮಂಡ್ಯ 11 ಮತ್ತು ರಾಮನಗರದಲ್ಲಿ 4 ಜನರಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ 1263 ಮಂದಿ ಗುಣಮುಖರಾಗಿದ್ದು, ಇಲ್ಲಿಯವರೆಗೆ 19,729 ಜನರು ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.  ಸದ್ಯ ರಾಜ್ಯದಲ್ಲಿ 30,655 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 539 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss