Thursday, July 7, 2022

Latest Posts

ರಾಜ್ಯದಲ್ಲಿ ಇಂದು 430 ಮಂದಿಗೆ ಕೊರೋನಾ ಪಾಸಿಟಿವ್ ದೃಢ, 470 ಸೋಂಕಿತರು ಗುಣಮುಖ

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಇಂದು ಶುಕ್ರವಾರ 430 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,41,500ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ಕೊರೋನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,230ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ ಇಂದು 470 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,23,377ಕ್ಕೆ ಏರಿಕೆಯಾಗಿದೆ. ಇನ್ನು 5874 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 144 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss