ಬೆಂಗಳೂರು: ಜುಲೈ ತಿಂಗಳ ಕೊನೆಯ ದಿನವಾದ ಇಂದು ರಾಜ್ಯದಲ್ಲಿ 5483 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 1,24,115ಕ್ಕೆ ಏರಿಕೆಯಾಗಿದೆ.
ಇಂದು 84 ಮಂದಿ ಬಲಿಯಾಗಿದ್ದಾರೆ.ಈ ಮೂಲಕ ರಾಜ್ಯದಲ್ಲಿ ಕೊರೋನಾ ಸಾವಿನ ಸಂಖ್ಯೆ 2314 ಕ್ಕೆ ಏರಿಕೆಯಾಗಿದೆ.
ಶುಕ್ರವಾರ 3130 ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು 49,788 ಜನ ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇನ್ನೂ 72,005 ಪ್ರಕರಣಗಳು ಸಕ್ರಿಯವಾಗಿದ್ದು, ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.