ಹೊಸ ದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಇಂದು ಹೊಸದಾಗಿ 645 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 9,33,077ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಸೋಂಕಿತರಾದಂತ 6 ಜನರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಇಂದು 807 ಸೋಂಕಿತರು ಸೇರಿದಂತೆ ಇದುವರೆಗೆ 9,13,012 ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 7,865 ಆಗಿದೆ.