Wednesday, August 10, 2022

Latest Posts

ರಾಜ್ಯದಲ್ಲಿ ಇಂದು 7,339 ಜನರಿಗೆ ಕೊರೋನಾ ಸೋಂಕು ದೃಢ , 9,925 ಜನರು ಆಸ್ಪತ್ರೆಯಿಂದ ಗುಣಮುಖ

ಬೆಂಗಳೂರು: ರಾಜ್ಯದಲ್ಲಿ ಇಂದು 7,339 ಜನರಿಗೆ ಹೊಸದಾಗಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು,ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ.
ಕಿಲ್ಲರ್ ಕೊರೊನಾಗೆ ರಾಜ್ಯದಲ್ಲಿ ಇಂದು 122 ಜನರು ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 8145 ಕ್ಕೇರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
24 ಗಂಟೆಯಲ್ಲಿ ರಾಜ್ಯದಲ್ಲಿ ಒಟ್ಟು 9,925 ಜನರು ಆಸ್ಪತ್ರೆಯಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಒಟ್ಟು 4,23,377 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್​ ಆಗಿದ್ದಾರೆ
ರಾಜ್ಯದಲ್ಲಿ 95,335 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss