ಬೆಂಗಳೂರು: ರಾಜ್ಯದಲ್ಲಿ ಇಂದು 7665 ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 2,40,948ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 139 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದೆ.ಒಟ್ಟಾರೆ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4201 ಕ್ಕೆ ಏರಿದೆ.
8,397 ಮಂದಿ ಒಂದೇ ದಿನ ಡಿಸ್ಚಾರ್ಜ್ ಆಗಿದ್ದು, ಒಟ್ಟು 1,56,949 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆ ಆಗಿದ್ದು, 79,782 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.