Sunday, July 3, 2022

Latest Posts

ರಾಜ್ಯದಲ್ಲಿ ಇಂದು 9,140 ಜನರಿಗೆ ಕೊರೋನಾ ಪಾಸಿಟಿವ್, 9,557 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್

ಬೆಂಗಳೂರು : ರಾಜ್ಯದಲ್ಲಿ ಇಂದು 9,140 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 4,49,551ಕ್ಕೆ ಏರಿಕೆಯಾಗಿದೆ.
ಇನ್ನು ರಾಜ್ಯದಲ್ಲಿ ಇಂದು 94 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 7,161ಕ್ಕೆ ಏರಿಕೆಯಾಗಿದೆ.
ಇಂದು 9,557 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 3,44,556ಕ್ಕೆ ಏರಿಕೆಯಾಗಿದೆ. 97,815 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 795 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss