ಬೆಂಗಳೂರು: 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 9464 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 4,40,411ಕ್ಕೆ ಏರಿಕೆಯಾಗಿವೆ. ರಾಜ್ಯದಲ್ಲಿ 12545 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 130 ಸೋಂಕಿತರು ಮೃತಪಟ್ಟಿದ್ದಾರೆ.
ಇದೀಗ ಒಟ್ಟು 3,34,099 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವುದರಿಂದ ರಾಜ್ಯದಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 98,326 ಆಗಿದೆ.
ರಾಜ್ಯದಲ್ಲಿ ಕೊರೋನಾ ಸಂಬಂಧಿ ಒಟ್ಟು 7067 ಸಾವಿನ ಪ್ರಕರಣಗಳು ದಾಖಲಾಗಿವೆ, 19 ಜನ ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ.