Monday, August 15, 2022

Latest Posts

ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ವ್ಯಾಪಕ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

ಮಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಮತ್ತು ನಾಳೆ ಹಾಗೂ ನಾಡಿದ್ದು ವ್ಯಾಪಕ ಮಳೆಯಾಗಲಿದ್ದು, 27ರ ನಂತರ ಮಳೆರಾಯನ ಆರ್ಭಟ ತಗ್ಗಲಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಅಕ್ಟೋಬರ್ ‌24ರಿಂದ ಉತ್ತರ ಒಳನಾಡಿನ ಕೆಲವು ಭಾಗದಲ್ಲಿ ಮಳೆಯಾಗಲಿದ್ದು, 27-28ರಂದು ಒಣಹವೆ ಮುಂದುವರೆಯಲಿದೆ.
ಬೆಳಗಾವಿ, ಹಾವೇರಿ, ಗದಗ ಧಾರವಾಡ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಿದ್ದು, ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲ ಪ್ರದೇಶಗಳಲ್ಲೂ ಮಳೆಯಾಗಲಿದೆ. ಇನ್ನು ಬೆಂಗಳೂರು, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ ಭಾಗದಲ್ಲಿ ಅತೀ ಹೆಚ್ಚು ಮಳೆಯಾಗ ಬಹುದು ಎನ್ನಲಾಗಿದ್ದು, ಈ ಜಿಲ್ಲೆಗಳಲ್ಲೂಈ ಕೂಡ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss