Tuesday, August 16, 2022

Latest Posts

ರಾಜ್ಯದಲ್ಲಿ ಇನ್ಮುಂದೆ ಒಂದಲ್ಲ, ಎರಡಲ್ಲ ಬರೋಬ್ಬರಿ ‘ಮೂರು’ ಸಲ ನಡೆಯಲಿದೆ ಕೊರೋನಾ ಟೆಸ್ಟ್

ಬೆಂಗಳೂರು: ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಆರ್ ಟಿ-ಪಿಸಿಆರ್ ಲ್ಯಾಬ್ ಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ನಡೆಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆ ಮೇರೆಗೆ ಕೊರೋನಾ ಪರೀಕ್ಷೆಯನ್ನ ಮೂರು ಬಾರಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದು, ಇದಕ್ಕೆ ಪೂರಕವಾಗಿ ಆರ್ ಟಿ-ಪಿಸಿಆರ್ ಪರೀಕ್ಷೆಗಳನ್ನ ನಡೆಸಲು ಲ್ಯಾಬ್ ಗಳನ್ನು ಸ್ಥಾಪಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳು ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಶುರು ಮಾಡಲಾಗವುದು ಎಂದು ಸುಧಾಕರ್ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ವೈಟ್ ಫೀಲ್ಡ್ ನಲ್ಲಿ ಯೂರೋಪಿನ್ಸ್ ಕ್ಲಿನಿಕಲ್ ಜೆನೆಟಿಕ್ಸ್ ಇಂಡಿಯಾ (ಇಸಿಜಿಐ) ವತಿಯಿಂದ ನೂತನ ಕೋವಿಡ್ ಟೆಸ್ಟಿಂಗ್ ಲ್ಯಾಬ್ ಉದ್ಘಾಟಿಸಿದ್ದು ಸಚಿವರು, ದಿನಕ್ಕೆ 5,000 ಪರೀಕ್ಷೆಗಳನ್ನು ನಡೆಸುವ ನಿರೀಕ್ಷೆ ಇದೆ. ರಾಜ್ಯದಲ್ಲಿ ಕಳೆದ ಆರು ತಿಂಗಳಲ್ಲಿ 144 ಲ್ಯಾಬ್ ಗಳನ್ನು ಆರಂಭಿಸಲಾಗಿದೆ ಎಂದರು.
ರಾಜ್ಯದಲ್ಲಿ ಇದುವರೆಗೆ 50 ಲಕ್ಷ COVID-19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಮೈಲಿಗಲ್ಲನ್ನು ಸಾಧಿಸಿದೆ ಮತ್ತು ದೈನಂದಿನ ಪರೀಕ್ಷೆಗಳ ಸಂಖ್ಯೆಯನ್ನು ಒಂದು ಲಕ್ಷದಿಂದ 1.5 ಲಕ್ಷಕ್ಕೆ ಹೆಚ್ಚಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss