Wednesday, June 29, 2022

Latest Posts

ರಾಜ್ಯದಲ್ಲಿ ಇಳಿಕೆಯತ್ತ ಕೊರೋನಾ ಸೋಂಕಿನ ಸಂಖ್ಯೆ: ಇಂದು 3146 ಜನರಿಗೆ ಪಾಸಿಟಿವ್, 7384 ಜನರು ಗುಣಮುಖ

ಮಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಇಳಿಕೆಯತ್ತ ಸಾಗಿದೆ. ಇಂದು ಹೊಸದಾಗಿ ರಾಜ್ಯದಲ್ಲಿ 3146 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 8,12,784ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೋಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ .
ಇಂದು 7384 ಜನರು ಸಹಿತ ಇದುವರೆಗೆ 7,33,558 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ 68,161 ಸಕ್ರೀಯ ಸೋಂಕಿತರಿರುವುದಾಗಿ ತಿಳಿಸಿದೆ.
ರಾಜ್ಯಾಧ್ಯಂತ ಕಿಲ್ಲರ್ ಕೊರೋನಾಗೆ 55 ಜನರು ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೋನಾ ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 11,046ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss