Tuesday, August 16, 2022

Latest Posts

ರಾಜ್ಯದಲ್ಲಿ ಇಳಿಕೆ ಕಂಡ ಕೊರೋನಾ ಪ್ರಮಾಣ: ಇಂದು 2,116 ಹೊಸ ಕೇಸ್ ದಾಖಲು, 3,368 ಮಂದಿ ಗುಣಮುಖ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇಳಿಕೆಯಾಗಿದ್ದು, ಇಂದು 2,116 ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 8,55,912 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ 21 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 11,474ಕ್ಕೆ ಏರಿಕೆಯಾಗಿದೆ .
ಇಂದು 3,368 ಮಂದಿ ಕೋವಿಡ್‌ ಸೋಂಕಿತರು ಗುಣಮುಖರಾಗಿದ್ದಾರೆ. ಇದುವರೆಗೆ 8,14,949 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 29,470 ಸಕ್ರಿಯ ಪ್ರಕರಣಗಳಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss