Thursday, July 7, 2022

Latest Posts

ರಾಜ್ಯದಲ್ಲಿ ಈವರೆಗೆ ಒಟ್ಟು 1,38,656 ಮಂದಿಗೆ ಕೊರೊನಾ ಲಸಿಕೆ: ಸಚಿವ ಡಾ.ಕೆ.ಸುಧಾಕರ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಒಟ್ಟು 1,38,656 ಮಂದಿಗೆ ಕೊರೊನಾ ಲಸಿಕೆ ನೀಡಿದ್ದು, ಕೆಲವರಿಗೆ ಮಾತ್ರ ಅಡ್ಡ ಪರಿಣಾಮವಾಗಿದೆ. ಯಾರೂ ಮರಣ ಹೊಂದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ1,36,882 ಮಂದಿಗೆ ಕೋವಿಶೀಲ್ಡ್, 1,774 ಮಂದಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗಿದೆ. ಈ ಪೈಕಿ ಶೇ.2 ರಿಂದ 3.5 ಜನರಿಗೆ ಸ್ವಲ್ಪ ಅಡ್ಡಪರಿಣಾಮ ಉಂಟಾಗಿದೆ. 8,47,908 ಮಂದಿ ಲಸಿಕೆ ಪಡೆಯಲು ಹೆಸರು ನೋಂದಾಯಿಸಿಕೊಂಡಿದ್ದರು.
3,27,201 ಸರ್ಕಾರಿ ಆರೋಗ್ಯ ಸಿಬ್ಬಂದಿ, 4,45,389 ಖಾಸಗಿ ಆರೋಗ್ಯ ಸಿಬ್ಬಂದಿ ಇದ್ದಾರೆ. ಒಟ್ಟು 7,72,591 ಆರೋಗ್ಯ ಸಿಬ್ಬಂದಿ ಇದ್ದಾರೆ. ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಿದವರು 75,318 ಮಂದಿ ಇದ್ದಾರೆ.
2 ನೇ ಹಂತದಲ್ಲಿ ರಾಜ್ಯದ ಒಂದೂವರೆಯಿಂದ ಎರಡು ಕೋಟಿ ಜನರಿಗೆ ಲಸಿಕೆ ನೀಡಬೇಕಾಗುತ್ತದೆ. ಇದು ಬಹುದೊಡ್ಡ ಸವಾಲು ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss