ಬೆಳಗಾವಿ: ರಾಜ್ಯದಲ್ಲಿ ಎರಡ್ಮೂರು ದಿನಗಳಲ್ಲಿ ಪಬ್, ಬಾರ್ ಹಾಗೂ ರೆಸ್ಟೋರೆಂಟ್ ತೆರೆಯಲಾಗುವುದು ಎಂದು ಅಬಕಾರಿ ಸಚಿವ ಎಚ್. ನಾಗೇಶ್ ತಿಳಿಸಿದರು
ಬೆಳಗಾವಿಯ ಸುವರ್ಣ ಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪಾಲನೆ ಹಾಗೂ ಕೋವಿಡ್ ರೋಗದ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ. ಎರಡ್ಮೂರು ದಿನಗಳಲ್ಲಿ ರಾಜ್ಯದ ಎಲ್ಲ ಪಬ್, ರೆಸ್ಟೋರೆಂಟ್ ತೆರೆಯಲಾಗುವುದು ಎಂದರು.
ಕೋವಿಡ್ ಹಿನ್ನೆಲೆ ಈವರೆಗೆ ಅಬಕಾರಿ ಇಲಾಖೆಗೆ ಮೂರು ಸಾವಿರ ಕೋಟಿ ರೂ. ನಷ್ಟ ಆಗಿದೆ ಎಂದು ತಿಳಿಸಿದರು.
ಬೆಂಗಳೂರು ಡ್ರಗ್ಸ್ ಜಾಲ ಪತ್ತೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕೆಲವು ಕಡೆಗಳಲ್ಲಿ ನಾರ್ಕೋಟಿಕ್ಸ್ ಜಾಲ ಇದೆ ಎಂಬ ಮಾಹಿತಿ ಇದೆ. ಪೊಲೀಸರ ಜತೆಗೆ ಜಂಟಿಯಾಗಿ ಕಾರ್ಯಾಚರಣೆ ಮಾಡುತ್ತೇವೆ. ಹೊಸದಾಗಿ ಯಾವುದೇ ಲೈಸೆನ್ಸ್ ಕೊಡುವುದಿಲ್ಲ. ಅಬಕಾರಿ ಸಿಬ್ಬಂದಿಗೆ ವೆಪನ್ ಕೊಡುವ ಬಗ್ಗೆ ಸಿಎಂ ಜೊತೆಗೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.