Wednesday, July 6, 2022

Latest Posts

ರಾಜ್ಯದಲ್ಲಿ ಎಸ್‌ಡಿಪಿಐ ನಿಷೇಧ ಬಗ್ಗೆ ಕ್ಯಾಬಿನೆಟ್ ನಲ್ಲಿ ಪ್ರಸ್ತಾಪ: ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು: ಬೆಂಗಳೂರಿನಲ್ಲಿ ನಡೆದಿರುವ ಗಲಭೆಯಲ್ಲಿ ಎಸ್‌ಡಿಪಿಐ ಕೈವಾಡವಿದೆ ಎಂದು ಹೇಳಲಾಗುತ್ತಿರುವ ಕಾರಣ ಆ ಪಕ್ಷವನ್ನು ನಿಷೇಧಿಸುವ ಬಗ್ಗೆ ಕ್ಯಾಬಿನೇಟ್‌ನಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.
ಶನಿವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಡಿಪಿಐ ನಿಷೇಧಿಸುವ ಕುರಿತು ರಾಜ್ಯಾದ್ಯಂತ ಚರ್ಚೆ ನಡೆಯುತ್ತಿದೆ, ಕ್ಯಾಬಿನೆಟ್ ನಲ್ಲಿ ವಿಚಾರ ಪ್ರಸ್ತಾಪ ಮಾಡುತ್ತೇವೆ. ಕಾಂಗ್ರೆಸ್ ಹಿರಿಯ ಶಾಸಕ ರಾಮಲಿಂಗಾರೆಡ್ಡಿಯವರೇ ಎಸ್‌ಡಿಪಿಐ ಬ್ಯಾನ್ ಮಾಡಿ. ಇದರಿಂದ ಕಾಂಗ್ರೆಸ್ ಗೆ ಏಟು ಜಾಸ್ತಿ ಅಂತ ಹೇಳಿದ್ದಾರೆ. ಹೀಗಾಗಿ ಅದನ್ನು ಬ್ಯಾನ್ ಮಾಡಲು ತೀರ್ಮಾನ ಮಾಡುತ್ತೇವೆ. ಬ್ಯಾನ್ ಮಾಡುವುದು ಒಂದು ಕಡೆ ಆದರೆ, ಗಲಭೆಕೋರರಿಂದಲೇ ನಷ್ಟ ಭರಿಸಲು ಗೃಹ ಸಚಿವರು ಸೂಚನೆ ನೀಡಿದ್ದಾರೆ ಎಂದರು.
ನನ್ನ ಮೇಲೆ ಹಲ್ಲೆ ನಡೆಸಲು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಪುತ್ರ ಪ್ರಚೋದನೆ ನೀಡಿದ್ದಾರೆ ಎಂಬ ಹುಣಸೂರು ಶಾಸಕ ಹೆಚ್.ಪಿ ಮಂಜುನಾಥ್ ಆರೋಪ ಕುರಿತು ತನಿಖೆ ನಡೆಸುವಂತೆ ಎಸ್ಪಿಯವರಿಗೆ ಸೂಚಿಸಿದ್ದೇನೆ. ಲೋಕಲ್ ನವರು ಮೊಬೈಲ್‌ನಲ್ಲಿ ಮಾತನಾಡಿಕೊಂಡಿದ್ದಾರೆ. ನಿನ್ನೆ ಮೀಟಿಂಗ್‌ನಲ್ಲಿ ಶಾಸಕ ಮಂಜುನಾಥ್ ಈ ವಿಚಾರ ಪ್ರಸ್ತಾಪ ಮಾಡಿದರು. ಹೀಗಾಗಿ ಈ ಬಗ್ಗೆ ಕೂಡಲೇ ತನಿಖೆ ನಡೆಸಲು ಎಸ್ಪಿ ಅವರಿಗೆ ಸೂಚನೆ ನೀಡಿದ್ದೇನೆ. ಮೊಬೈಲ್ ಟು ಮೊಬೈಲ್ ಇಬ್ಬರ ನಡುವೆ ಸಂಭಾಷಣೆ ನಡೆದಿದೆ. ಎಸ್ಪಿಯವರು ತನಿಖೆ ಮಾಡಲಿದ್ದು, ಇದರಲ್ಲಿ ಯಾರು ಭಾಗಿಯಾಗಿದ್ದಾರೆ ಎಂದು ಸಾಬೀತಾದ ಬಳಿಕ ಕ್ರಮ ಕೈಗೊಳ್ಳುತ್ತಾರೆ ಎಂದು ಸಚಿವರು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss