Sunday, June 26, 2022

Latest Posts

ರಾಜ್ಯದಲ್ಲಿ ಒಟ್ಟು 5,22,846 ಜನರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಇಂದು 7,051 ಪಾಸಿಟಿವ್  

ಬೆಂಗಳೂರು: ರಾಜ್ಯದಲ್ಲಿ ಇಂದು 7,051 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 6,4 7, 712 ಕ್ಕೆ ಏರಿಕೆಯಾಗಿದೆ ಎಂದು
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.
ಇನ್ನೂ ಇಂದು ಕೊರೋನಾ ಸೋಂಕಿಗೆ ಬಲಿಯಾಗುವವ ಸಂಖ್ಯೆ ಕಡಿಮೆಯಾಗಿದೆ. ಇಂದು ಕೊರೋನಾಗೆ 84 ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಬಲಿಯಾದವರ ಸಂಖ್ಯೆ 9,370ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 7064 ಜನರು ಗುಣಮುಖರಾಗಿದ್ದಾರೆ. ಈ ಮೂಲಕ 5,22,846 ಜನರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಇದೀಗ 1,15,477 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss