Thursday, July 7, 2022

Latest Posts

ರಾಜ್ಯದಲ್ಲಿ ಕಡಿಮೆಯಾಗುತ್ತಿದೆ ಕೊರೋನಾ ಸೋಂಕಿನ ಪ್ರಮಾಣ: ಶುರುವಾಗಲಿದೆಯೇ ಶಾಲೆ?

ಮಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದು, ಗುಣಮುಖರಾದವರ ಸಂಖ್ಯೆ ಅಧಿಕವಾಗುತ್ತಿದೆ . ಆದರೆ ಇದರ ನಡುವೆ ಶಾಲೆ ಆರಂಭ ಯಾವಾಗ ಎಂಬ ಪ್ರಶ್ನೆಗೆ ಉತ್ತರ ಇನ್ನೂ ಸಿಕ್ಕಿಲ್ಲ.
ಈಗಾಗಲೇ ಕೇಂದ್ರ ಸರ್ಕಾರ ಶಾಲಾ-ಕಾಲೇಜು ಆರಂಭದ ಕುರಿತು ಆಯಾ ರಾಜ್ಯಕ್ಕೆ ಸಂಪೂರ್ಣ ಅಧಿಕಾರ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಸದ್ಯ ರಾಜ್ಯದಲ್ಲಿ ನವೆಂಬರ್ 17ರಿಂದ ಪದವಿ ಕಾಲೇಜುಗಳು ಆರಂಭವಾಗಲಿದ್ದು, ಶಾಲೆ ಆರಂಭದ ಕುರಿತು ನ.04 (ನಾಳೆ)ರಂದು ಸಭೆ ನಡೆಯಲಿದೆ.
ನಾಳೆ ಸಮಗ್ರ ಶಿಕ್ಷಣ ಅಭಿಯಾನದಲ್ಲಿ ಬೆಳಗ್ಗೆ 11:30ಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಹಾಗೂ ಆಯಾ‌ ಜಿಲ್ಲಾ ಉಪ ನಿರ್ದೇಶಕರು, ಬಿಇಒ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಪೆರನ್ಸ್ ನಡೆಸಲಿದ್ದಾರೆ. ಇಲ್ಲಿ ರಾಜ್ಯದಲ್ಲಿ ಶಾಲೆ ಪುನಾರಂಭ ಯಾವಾಗ ಎಂಬುದು ಸಭೆಯಲ್ಲಿ ಅಂತಿಮವಾಗುವ ಸಾಧ್ಯತೆ ಇದೆ.
ಇನ್ನು ಈಗಾಗಲೇ ಇತರೆ ರಾಜ್ಯಗಳಲ್ಲಿ ಶಾಲಾರಂಭ ಮಾಡಲಾಗಿದೆ. ಕಳೆದ 18 ದಿನಗಳಿಂದ ರಾಜ್ಯದಲ್ಲಿ ಕೊರೊನಾ‌ ಪ್ರಕರಣ ಕೂಡ ಕಡಿಮೆಯಾಗುತ್ತಿದ್ದು, ಶಿಕ್ಷಣ ಇಲಾಖೆಯೇ ರಚಿಸಿರೋ ತಜ್ಞರ ಸಮಿತಿಯಿಂದ ಸಂಪೂರ್ಣ ಎಸ್‌ಒಪಿ ನೀಡಲಾಗಿದೆ.ಯಾವ ರೀತಿ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎನ್ನುವುದರ ಬಗ್ಗೆ ಮಾರ್ಗಸೂಚಿ ನೀಡಲಾಗಿದೆ.ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಂದ ಡಿಡಿಪಿಐ ಹಾಗೂ ಬಿಇಒಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಸಭೆಯು ನಿನ್ನೆ ನಡೆಯಬೇಕಿತ್ತು. ಆದರೆ, ತಾಂತ್ರಿಕ ಸಮ್ಯಸೆಯಿಂದ ನಾಳೆಗೆ ಅಂದರೆ ಬುಧವಾರಕ್ಕೆ ಮುಂದೂಡಲಾಗಿದೆ‌.
ಆಂಧ್ರಪ್ರದೇಶದಲ್ಲಿ ಶುರುವಾಗಿದೆ ಶಾಲೆ
ನವೆಂಬರ್ 2ರಿಂದ 9,10, 11 ಮತ್ತು12 ತರಗತಿಗಳಿಗೆ ಶಾಲೆ ಆರಂಭವಾಗಿದೆ. ನವೆಂಬರ್ 23 ರಿಂದ 6, 7, 8ನೇ ತರಗತಿಗಳಿಗೆ 1 ರಿಂದ 5ನೇ ತರಗತಿಗೆ ಡಿ.14 ರಿಂದ ಶಾಲೆ ಆರಂಭವಾಗಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss