ಮಂಗಳೂರು: ರಾಜ್ಯದಲ್ಲಿ ಸತತ 17ನೇ ದಿನವೂ ಕೊರೋನಾ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆಯಲ್ಲಿ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 7468 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅಲ್ಲದೇ 3014 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ .
28 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 11168ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 823412ಕ್ಕೆ ಏರಿಕೆಯಾಗಿದ್ದು, 757208 ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 55017 ಸಾವಿರ ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.