ಮಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಇಳಿಮುಖವಾಗುತ್ತಿದೆ. ಇಂದು 2,576 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 8,29,640ಕ್ಕೆ ಏರಿಕೆಯಾಗಿದೆ.
ಇನ್ನು ಸೋಂಕಿಗೆ 29 ಮಂದಿ ಮೃತರಾಗಿದ್ದು, ಸಾವಿನ ಸಂಖ್ಯೆ 11,221ಕ್ಕೆ ಏರಿಕೆ ಆಗಿದೆ.
ರಾಜ್ಯದಲ್ಲಿ ಗುಣಮುಖರಾದವರ ಸಂಖ್ಯೆಯಲ್ಲೂ ಏರಿಕೆ ಕಾಣುತ್ತಿದೆ. ಇಂದು 8334 ಸೋಂಕಿತರು ಗುಣಮುಖರಾಗಿದ್ದು ಈವರೆಗೆ 7,73,595 ಜನರು ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳು ಸದ್ಯ 44,805 ಇದ್ದು 931 ಸೋಂಕಿತರು ತೀವ್ರ ನಿಗಾ ಘಟಕದಲ್ಲಿ ಇದ್ದಾರೆ.