ಬೆಂಗಳೂರು: ಕ್ರಷರ್ ಉದ್ಯಮದ ಕೆಲ ಷರತ್ತುಗಳನ್ನು ಸಡಿಲಗೊಳಿಸಿ ರಾಜ್ಯ ಸರ್ಕಾರ ಮೂರು ತಿಂಗಳ ಹಿಂದೆ ಜಾರಿಗೆ ತಂದ ಸುಗ್ರೀವಾಜ್ಞೆ ಪ್ರಶ್ನಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ರಿಟ್ ಅರ್ಜಿ ವಿಚಾರಣೆಗೆ ಅಂಗೀಕಾರವಾಗಿದೆ.
ಪರಿಸರವಾದಿ ಆಂಜನೇಯರೆಡ್ಡಿ ಸಲ್ಲಿಸಿರುವ ಅರ್ಜಿಯನ್ನು ವಿಭಾಗೀಯ ಪೀಠ ಅಂಗೀಕರಿಸಿದ್ದು ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಕಲ್ಲುಗಣಿಗಾರಿಕೆ ಹಾಗೂ ಕ್ರಷರ್ ಉದ್ಯಮ ಸಂಬಂಧ ಎರಡು ದಶಕಗಳ ಹಿಂದೆಯೇ ಹೈಕೋರ್ಟ್ ಷರತ್ತುಗಳನ್ನು ವಿಧಿಸಿದ್ದು ಅದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ಈಗ ರಾಜ್ಯದಲ್ಲಿ ಸುಗ್ರೀವಾಜ್ಞೆ ಜಾರಿಗೊಂಡಿರುವುದರಿಂದ ಅಕ್ರಮ ಕ್ರಷರ್ಗಳು ವ್ಯಾಪಕವಾಗಿ ತಲೆ ಎತ್ತಲು ಕಾರಣವಾಗಿದೆ ಎಂದು ಅರ್ಜಿದಾರರು ನ್ಯಾಯಪೀಠಕ್ಕೆ ಮನವಿ ಮಾಡಿದ್ದಾರೆ.
ಮಧ್ಯಂತರ ತಡೆ
ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಶೇ ೨೫ ರಷ್ಟು ಸೀಟುಗಳನ್ನು ಮೀಸಲಿಡಬೇಕೆಂಬ ನಿಯಮಾವಳಿಗೆ ರಾಜ್ಯ ಹೈಕೋರ್ಟ್ ತಡೆ ನೀಡಿದೆ. ಬಿ. ವಿ ನಾಗರತ್ನ ಅವರಿದ್ದ ವಿಭಾಗೀಯ ಪೀಠವು ಮಂಗಳವಾರದಂದು ಮಧ್ಯಂತರ ಆದೇಶವೊಂದನ್ನು ಜಾರಿಗೊಳಿಸಿದೆ. ಸೆ. ೧೨ ರಂದು ಕಾನೂನು ವ್ಯಾಸಂಗ ಶಾಲೆ ಪ್ರವೇಶಕ್ಕೆ ಸಂಬಂಧಿಸಿದಂತೆ ಲಖಿತ ಪರೀಕ್ಷೆ ನಡೆಯಲಿದೆ. ಈ ಪ್ರವೇಶ ಪರೀಕ್ಷೆಗೆ ಯಾವುದೇ ತಡೆ ಇಲ್ಲ. ಆದರೆ ಅಭ್ಯರ್ಥಿಗಳ ಮುಂದಿನ ಆಯ್ಕೆ ರಿಟ್ ಅರ್ಜಿಯ ಅಂತಿಮ ತೀರ್ಪನ್ನು ಅಧರಿಸಿದೆ