ಬೆಂಗಳೂರು: ರಾಜ್ಯದಲ್ಲಿ ಗುರುವಾರ 9,366 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,94,356ಕ್ಕೆ ಏರಿಕೆಯಾಗಿದೆ.
ಇಂದು 93 ಜನ ವೈರಸ್ನಿಂದ ಮೃತಪಟ್ಟಿದ್ದಾರೆ. ಒಟ್ಟು 7,629 ಕೊರೊನಾ ಸಂಬಂಧಿತ ಸಾವುಗಳು ರಾಜ್ಯದಲ್ಲಿ ಸಂಭವಿಸಿವೆ.
ಇಂದು 7,268 ಜನ ಸೋಂಕಿನಿಂದ ಚೇತರಿಕೆಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈ ಮೂಲಕ 3,83,077 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಒಟ್ಟು 1,03,631 ಪ್ರಕರಣಗಳು ಸಕ್ರಿಯವಾಗಿವೆ.