ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆ ರಾಜ್ಯದಲ್ಲಿ ದೀಪಾವಳಿ ಹಬ್ಬದ ವೇಳೆ ಪಟಾಕಿ ನಿಷೇಧ ಮಾಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಸ್ವಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಯಾರೂ ಪಟಾಕಿ ಮಾರಾಟ ಮತ್ತು ಪಟಾಕಿ ಸಿಡಿಸುವಂತಿಲ್ಲ. ಪಟಾಕಿ ನಿಷೇಧದ ಕುರಿತು ಸರ್ಕಾರ ಶೀಘ್ರದಲ್ಲಿಯೇ ಅಧಿಕೃತ ಆದೇಶ ಹೊರಡಿಸಲಿದೆ ಎಂದು ತಿಳಿಸಿದರು.
ಭಾರತದಲ್ಲಿ ಈಗಾಗಲೇ ಮಹಾರಾಷ್ಟ್ರ, ರಾಜಸ್ಥಾನ, ಪಶ್ಚಿಮ ಬಂಗಾಳ, ದೆಹಲಿಯಲ್ಲಿ ಪಟಾಕಿ ನಿಷೇಧಿಸಿದೆ.