ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಲಾಕ್ ಡೌನ್ ಜಾರಿಯಲ್ಲಿದ್ದರೂ ಸಹ ಜನರ ಅಮಾನವೀಯ ಕೃತ್ಯಗಳನ್ನು ಆಧಾರಿಸಿ ಲಾಕ್ ಡೌನ್ ನನ್ನು ಮೇ.3 ರರವರೆಗೂ ಜಾರಿಗೊಳಿಸಲಾಗುವುದೆಂದು ತಿಳಿಸಿದ್ದಾರೆ.
ನಗರದಲ್ಲಿ ಕೊರೋನಾ ವಾರಿಯರ್ಸ್ ವಿರುದ್ಧ ನಡೆಯುತ್ತಿರುವ ಹಲ್ಲೆಯ ವಿಚಾರವಾಗಿ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಚಿವ ಸಂಪುಟ ಸಭೆ ನಡೆಸಿದರು.
ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯದಲ್ಲಿ ಮೇ 3 ರವರೆಗೂ ಲಾಕ್ ಡೌನ್ ಮುಂದುವರೆಸಲಾಗಿದ್ದು, ಏ.21ರಂದು ರಾಜ್ಯದಲ್ಲಿ ಯಾವುದೇ ರೀತಿಯ ಲಾಕ್ ಡೌನ್ ಸಡಿಲ ಮಾಡುವುದಿಲ್ಲ ಎಂದು ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದಾರೆ. ರಾಜ್ಯದಲ್ಲಿ ಲಾಕ್ ಡೌನ್ ಉಲ್ಲಂಘಿಸಿದರೆ ಉತ್ತರ ಪ್ರದೇಶದ ಕಾನೂನನ್ನು ಜಾರಿಗೊಳಿಸಲಗುವುದು ಈ ಕುರಿತು ಸಭರಯಲ್ಲಿ ನಿರ್ಧಾರ ಮಾಡಲಾಗಿದೆ.