ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, May 6, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದಲ್ಲಿ ಪ್ರವಾಹದಿಂದ ಉಂಟಾಗಿರುವ ಬೆಳೆಹಾನಿಗೆ ಸರ್ವೆ ಕಾರ್ಯ: ಸಚಿವ ಬಿ.ಸಿ.ಪಾಟೀಲ್ ಮಾಹಿತಿ

ಮೈಸೂರು: ರಾಜ್ಯದಲ್ಲಿ ಪ್ರವಾಹದಿಂದ ಉಂಟಾಗಿರುವ ಬೆಳೆಹಾನಿಗೆ ಸಂಬoಧಿಸಿದoತೆ ಸರ್ವೆ ಕಾರ್ಯ ನಡೆಯುತ್ತಿದೆ
ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.
ಶುಕ್ರವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ತಿಂಗಳ ಹಿಂದೆ ಸುರಿದ ಭಾರಿ ಮಳೆ ಹಾಗೂ ಉಂಟಾದ ಪ್ರವಾಹದಿಂದ ಅಪಾರ ನಷ್ಟ ಮತ್ತು ಕಳೆದ ಒಂದು ವಾರದಿಂದ ಉತ್ತರ ಕರ್ನಾಟಕದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಆಗಿರುವ ಬೆಳೆ ಹಾನಿಯ ಬಗ್ಗೆ ಸದ್ಯಕ್ಕೆ ತಮ್ಮ ಬಳಿ ಯಾವುದೇ ಮಾಹಿತಿ ಇಲ್ಲ, ಆದರೆ ಕಳೆದ ವರ್ಷ ಬೆಳೆಹಾನಿಗೆ ಇಂದು ೩೬.೫೭ ಕೋಟಿ ರುಪಾಯಿ ಹಣ ಬಿಡುಗಡೆ ಆಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 800 ಕೋಟಿ ರೂ ಹಣ ಇದೆ. ಎಲ್ಲೆಲ್ಲಿ ಬೆಳೆ ಹಾನಿಯಾಗುತ್ತದೋ ಅಲ್ಲಿ ತಕ್ಷಣ ಸರ್ವೇ ಮಾಡಿಸಿ ಪರಿಹಾರ ನೀಡುವಂತೆ ಆದೇಶ ಮಾಡಲಾಗಿದೆ ಎಂದು ತಿಳಿಸಿದರು.
ಬೆಳೆ ನಷ್ಟಕ್ಕೆ ಪರಿಹಾರ ನೀಡಲು ವಿಳಂಬ ಆಗುತ್ತಿಲ್ಲ. ಪರಿಹಾರಕ್ಕಾಗಿ ಸ್ಪಷ್ಟ ದಾಖಲಾತಿ ಕೊಡಬೇಕಾಗುತ್ತದೆ. ದಾಖಲಾತಿ ಪರಿಶೀಲಿಸಲು ಸಮಯ ಬೇಕಾಗುತ್ತೆ. ಹೀಗಾಗಿ ವಿಳಂಬವಾಗುತ್ತೆ ಎಂದರು.
ರಸಗೊಬ್ಬರ ಕೊರತೆ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಕೃಷಿ ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದೇನೆ. ಒಂದು ವಾರದೊಳಗೆ ಇಲ್ಲಿನ ಬೇಡಿಕೆಯಷ್ಟು ರಸಗೊಬ್ಬರ ಸಿಗಲಿದೆ. ಈಗಾಗಲೇ ೪೫೦ ಮೆಟ್ರಿಕ್ ಟನ್ ರಸಗೊಬ್ಬರ ಬಂದಿದೆ. ಒಂದು ವಾರದೊಳಗೆ ಇಲ್ಲಿನ ಬೇಡಿಕೆಯಷ್ಟು ರಸಗೊಬ್ಬರ ಸಿಗಲಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಕುಟುಂಬದ ಸದಸ್ಯರ ಮೇಲೆ ಕಾಂಗ್ರೆಸ್ ನಾಯಕರು ಮಾಡಿರುವ ಭ್ರಷ್ಟಾಚಾರದ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಹಾಗಾಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರ ಆರೋಪ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.
ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಮುನಿರತ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳಿಂದಲೇ ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss