ಹೊಸ ದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಬುಧವಾರ 746 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 765 ಮಂದಿ ಗುಣಮುಖವಾಗಿದ್ದಾರೆ.
ಇದುವರೆಗೆ ಕೋವಿಡ್ ಸೋಂಕು ಖಚಿತವಾದವರ ಸಂಖ್ಯೆ 9,29,552ಗೆ ತಲುಪಿದ್ದು ಒಟ್ಟು 9,08,494 ಮಂದಿ ಗುಣಮುಖರಾಗಿದ್ದಾರೆ.
ಕೋವಿಡ್ ನಿಂದ ಬುಧವಾರ ರಾಜ್ಯದಲ್ಲಿ ಮೂವರು ಮೃತಪಟ್ಟಿದ್ದು, ಇದುವರೆಗೆ ಸಾವನ್ನಪ್ಪಿದವರ ಸಂಖ್ಯೆ 12,152ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇದೀಗ 8,887 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ಇವುಗಳ ಪೈಕಿ 193 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ನಗರದಲ್ಲಿ ಇಂದು 426 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.