Wednesday, August 17, 2022

Latest Posts

ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ: ಕರಾವಳಿ ಜಿಲ್ಲೆಗಳಲ್ಲಿ ಆ. 8-9 ರಂದು ರೆಡ್ ಅಲರ್ಟ್ ಘೋಷಣೆ

ಉಡುಪಿ: ಮುಂದಿನ 48 ತಾಸುಗಳ ನಂತರ ಉಡುಪಿ ಜಿಲ್ಲೆಯೂ ಸಹಿತ ಕರ್ನಾಟಕದ ಕರಾವಳಿಯಲ್ಲಿ ಅತ್ಯಂತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಮುನ್ಸೂಚನಾ ಕೇಂದ್ರ ನೀಡಿದೆ. ಅಲ್ಲದೇ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಹವಾಮಾನ ಮುನ್ಸೂಚನಾ ಕೇಂದ್ರ ಬೆಂಗಳೂರು ಬಿಡುಗಡೆ ಮಾಡಿದ ವರದಿಯಲ್ಲಿ, ಇಂದು ಮತ್ತು ನಾಳೆ ಉಡುಪಿ, ದ.ಕ. ಮತ್ತು ಉ.ಕ. ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆ. 8 ಮತ್ತು 9ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ.
ಇಂದು ಮತ್ತು ನಾಳೆ ಪ್ರತೀ 24 ತಾಸುಗಳಲ್ಲಿ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಅತಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಈ ಸಮಯದಲ್ಲಿ 115ರಿಂದ 205 ಮಿ.ಮೀ.ವರೆಗೆ ಮಳೆ ಸುರಿಯುವ ಸಾಧ್ಯತೆ ಇದೆ.

ರೆಡ್ ಅಲರ್ಟ್ ಘೋಷಣೆಯಾದ ಆ. 8 ಮತ್ತು 9ರಂದು ಪ್ರತೀ 24 ತಾಸುಗಳಲ್ಲಿ ವಿಪರೀತ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ. ಈ ಅವಧಿಯಲ್ಲಿ ಕರಾವಳಿಯ ಪ್ರತ್ಯೇಕ ಸ್ಥಳಗಳಲ್ಲಿ 205 ಮಿ.ಮೀ.ಗಿಂತಲೂ ಅಧಿಕ ಮಳೆ ಬೀಳುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಕರಾವಳಿಯಲ್ಲಿ ರೆಡ್ ಅಲರ್ಟ್ ಆ. 8ರ ಬೆಳಗ್ಗೆ 8.30ರಿಂದ ಆ. 10ರ ಬೆಳಗ್ಗೆ 8.30ರವರೆಗೆ ಇರಲಿದೆ. ಈ ಅವಧಿಯಲ್ಲಿ ಜಿಲ್ಲೆಯ ನದಿಪಾತ್ರ, ಸಮುದ್ರ ತೀರದ ಜನತೆ ಭಾರೀ ಜಾಗ್ರತೆಯಿಂದ ಇರಬೇಕೆಂದು ಕೇಂದ್ರವು ಮುನ್ನೆಚ್ಚರಿಕೆಯನ್ನು ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!