Sunday, August 14, 2022

Latest Posts

ರಾಜ್ಯದಲ್ಲಿ ಭಾರೀ ಮಳೆಯ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಪೂರ್ವ ಅಲೆಗಳ ಪರಿಣಾಮದಿಂದ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆ ಉಂಟಾಗುತ್ತಿದ್ದು, ಇಂದು ಹಾಗೂ ನಾಳೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಆಗಲಿದೆ.
ಇನ್ನು ಈಶಾನ್ಯ ಮುಂಗಾರಿನ ಮಾರುತಗಳು ಪ್ರಬಲವಾಗಿರುವುದರಿಂದ ರಾಜ್ಯದೆಲ್ಲೆಡೆ ಮೋಡ ಕವಿದ ವಾತಾವರಣವಿದೆ.ಬೀದರ್​, ಕಲಬುರ್ಗಿ, ಯಾದಗಿರಿಯ ಬಹುತೇಕ ಭಾಗ, ರಾಯಚೂರು, ಬೆಳಗಾವಿ, ಕೊಪ್ಪಳ ಹಾಗೂ ಬಳ್ಳಾರಿಯ ಕೆಲ ಪ್ರದೇಶಗಳಲ್ಲಿ ಕಡಿಮೆ ಪ್ರಮಾಣದಲ್ಲಿ ಮಳೆ ಉಂಟಾಗಲಿದೆ.
ವಿಜಯಪುರ, ಉತ್ತರ ಕನ್ನಡ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ರಾಮನಗರ , ಕೋಲಾರ ಹಾಗೂ ಚಿಕ್ಕಬಳ್ಳಾಪುರದ ಬಹುತೇಕ ಪ್ರದೇಶಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ.
ಬಾಗಲಕೋಟೆ, ಧಾರವಾಡ, ಗದಗ, ಚಿತ್ರದುರ್ಗದ ಬಹುತೇಕ ಭಾಗಗಳಲ್ಲಿ ಹಾಗೂ ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು ಚಾಮರಾಜನಗರ, ಮೈಸೂರಿನ ಕೆಲ ಪ್ರದೇಶಗಳಲ್ಲಿ ಮಧ್ಯಮ ಪ್ರಮಾಣದಲ್ಲಿ ಮಳೆ ಸುರಿಯಲಿದೆ.
ಇನ್ನು ಚಿಕ್ಕಮಗಳೂರು, ದಾವಣಗೆರೆ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಮೈಸೂರು, ಬಾಗಲಕೋಟೆ, ಹಾಗೂ ಹಾವೇರಿಯ ಕೆಲ ಪ್ರದೇಶಗಳಲ್ಲಿ ವರುಣ ಆರ್ಭಟಿಸಲಿದ್ದಾನೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss