Saturday, August 13, 2022

Latest Posts

ರಾಜ್ಯದಲ್ಲಿ ರಾಷ್ಟೀಯ ಶಿಕ್ಷಣ ನೀತಿಯನ್ನು ಸರ್ಕಾರ ಜಾರಿಗೆ ತರಲಿದೆ: ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್

ಮೈಸೂರು: ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ರಾಷ್ಟೀಯ ಶಿಕ್ಷಣ ನೀತಿಯನ್ನು ರಾಜ್ಯ ಸರ್ಕಾರ ಜಾರಿಗೆ ತರಲಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ತಿಳಿಸಿದರು.
ಶನಿವಾರ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಆಯೋಜಿಸಲಾಗಿದ್ದ ಶ್ರೀಶಿವರಾತ್ರಿ ರಾಜೇಂದ್ರ ಸ್ವಾಮಿಯವರ ೧೦೫ ನೇ ಜಯಂತಿ ಕಾರ್ಯಕ್ರಮದಲ್ಲಿ ಆನ್ ಲೈನ್ ಮೂಲಕ ಪ್ರಸಾದ ಸಂಚಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಇಡೀ ದೇಶದಲ್ಲಿ ಮೌಲ್ಯಯುತವಾದ, ಗುಣಮಟ್ಟದ ಕೌಶಲ್ಯಯುಕ್ತ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ರಾಷ್ಟೀಯ ಶಿಕ್ಷಣ ನೀತಿಯನ್ನು ಜಾರಿಗೆ ತರುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರವಾದ ಕ್ರಾಂತಿಯನ್ನು ಮಾಡಲು ಹೊರಟಿದೆ. ಈ ರಾಷ್ಟೀಯ ಶಿಕ್ಷಣ ನೀತಿಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಲು ಉತ್ಸಕವಾಗಿದೆ. ಇಡೀ ದೇಶದಲ್ಲಿಯೇ ರಾಷ್ಟೀಯ ಶಿಕ್ಷಣ ನೀತಿಯನ್ನು ಮೊದಲಬಾರಿಗೆ ಜಾರಿಗೊಳಿಸಿದ ರಾಜ್ಯ ಎಂಬ ಹೆಗ್ಗಳಿಕೆಯನ್ನು ಹೊಂದುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರಾಷ್ಟಿçÃಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಲು ತಯಾರಿದ್ದೇವೆ. ಶಿಕ್ಷಣ ಕ್ಷೇತ್ರವನ್ನು ಬಲಿಷ್ಠಗೊಳಿಸುವ ಕಾರ್ಯವನ್ನು ಮಾಡುತ್ತೇವೆ ಎಂದು ಹೇಳಿದರು. ಶಿಕ್ಷಣ ಕ್ಷೇತ್ರದಲ್ಲಿ ಇಡೀ ದೇಶಕ್ಕೆ ಕರ್ನಾಟಕ ರಾಜ್ಯ ಮಾದರಿಯಾಗಿದೆ. ಅದೇ ರೀತಿ ರಾಷ್ಟೀಯ ಶಿಕ್ಷಣ ನೀತಿಯನ್ನು ಇಡೀ ದೇಶದಲ್ಲಿ ಜಾರಿಗೊಳಿಸಿದ ಮೊದಲ ರಾಜ್ಯವಾಗಿ, ಇಡೀ ದೇಶಕ್ಕೆ ಮಾದರಿಯಾಗಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರ ರಾಷ್ಟೀಯ ಶಿಕ್ಷಣ ನೀತಿ ಜಾರಿಯನ್ನು ಕೈಗೆತ್ತಿಕೊಂಡಿದೆ ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss