ಹೊಸ ದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಬ್ರಿಟನ್ ರೂಪಾಂತರಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರ ಮಧ್ಯೆ ಕಂದಾಯ ಸಚಿವ ಆರ್. ಅಶೋಕ್ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ ಅವರು ಬ್ರಿಟನ್ ರೂಪಾಂತರ ವೈರಸ್ ಸೋಂಕಿನ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದೆ. ಆದರೆ ಸಂಪೂರ್ಣ ಲಾಕ್ ಡೌನ್ ಜಾರಿಯ ಅಗತ್ಯವಿಲ್ಲ. ಸೋಂಕಿನ ಪ್ರಕರಣಗಳು ಪತ್ತೆಯಾಗಿರುವಂತ ಜಿಲ್ಲೆಗಳಲ್ಲಿ ಮಾತ್ರವೇ ಲಾಕ್ ಡೌನ್ ಜಾರಿ ಮಾಡಬೇಕು ಎಂದಿದ್ದಾರೆ.
ರಾಜ್ಯದಲ್ಲಿ ಮತ್ತಷ್ಟು ಬಿಗಿ ಕ್ರಮ ಜಾರಿಗೆ ತರುವ ಸಂಬಂಧ ಸಿಎಂ ಬಿ.ಎಸ್.ಯಡಿಯೂರಪ್ಪ ಜೊತೆ ಚರ್ಚೆ ಮಾಡುತ್ತೇವೆ. ಸದ್ಯಕ್ಕೆ ಲಾಕ್ ಡೌನ್ ಅವಶ್ಯಕತೆ ಇಲ್ಲ ಎಂದಿದ್ದಾರೆ.