Thursday, July 7, 2022

Latest Posts

ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ: ರಸ್ತೆಗಿಳಿದ 1,200 ವಾಹನಗಳು ಸೀಜ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಶುಕ್ರವಾರ ರಾತ್ರಿ 10 ಗಂಟೆಯಿಂದ ವೀಕೆಂಡ್ ಕರ್ಪ್ಯೂ ಜಾರಿಗೊಂಡಿದ್ದು, ಈ ವೇಳೆ ಅನಗತ್ಯವಾಗಿ ರಸ್ತೆಯಲ್ಲಿ ತಿರುಗಾಡಿದ ಜನರ ವಾಹನಗಳನ್ನು ಸೀಜ್ ಮಾಡಿ, ದಂಡ ವಿಧಿಸಲಾಗಿದೆ.
ಈ ರೀತಿ ನಿಯಮ ಮೀರಿ ಹೊರಗೆ ಬಂದ 1,200 ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.
ನಾಳೆಯೂ ಕೂಡ ಪೊಲೀಸರು ಅನಗತ್ಯವಾಗಿ ರೋಡಿಗೆ ಇಳಿದವರಿಗೆ ದಂಡ, ವಾಹನ ಸೀಜ್ ಮಾಡಲಿದ್ದಾರೆ ಎಂದು ತಿಳಿಸಿದರು.
ಕೊರೋನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ವಾರಾಂತ್ಯ ಕರ್ಪ್ಯೂ ಸಂದರ್ಭಪೊಲೀಸರು ತುಂಬಾ ಶ್ರಮಪಟ್ಟು ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಜನರು ಅನಗತ್ಯವಾಗಿ ಹೊರಗೆ ಓಡಾಡಬಾರದು ಎಂಬುದಾಗಿ ಮನವಿ ಮಾಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss