ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದಲ್ಲಿ ಹಲವೆಡೆ ಮುಂದುವರಿದ ವರುಣನ ಆರ್ಭಟ: ಮನೆಗಳಿಗೆ ನೀರು, ರಸ್ತೆ ಸಂಪರ್ಕ ಕಡಿತ, ಬೆಳೆ ಹಾನಿ, ಜನಜೀವನ ಅಸ್ತವ್ಯಸ್ತ..

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ಕರಾವಳಿ,ಮಲೆನಾಡು ಭಾಗದಲ್ಲಿ ಮಳೆಯಿಂದಾಗಿ ನದಿಗಳು ತುಂಬಿ ಹರಿಯುತ್ತಿದ್ದು,ಡ್ಯಾಂಗಳಿಂದ ಲಕ್ಷ ಕ್ಯುಸೆಕ್ ನೀರು ಹೊರಬಿಡಲಾಗುತ್ತಿದೆ. ಕೆಲವೆಡೆ ಪ್ರವಾಹ ಭೀತಿಯೂ ಎದುರಾಗಿದೆ.  ಮಹಾಮಳೆಗೆ ಕೊಡಗಿನ ಜನತೆ ಕಂಗಾಲಾಗಿದ್ದು, ಬೆಟ್ಟ ಕುಸಿದು ನಾಪತ್ತೆಯಾಗಿದ್ದ ಕುಟುಂಬದ ಬಗ್ಗೆ ಇನ್ನು ಸುಳಿವು ಸಿಕ್ಕಿಲ್ಲ. ಮಳೆಯಿಂದಾಗಿ ಭಾಗಮಂಡಲ-ತಲಕಾವೇರಿ ಬಳಿ ಗುಡ್ಡ ಕುಸಿದಿದ್ದು, ರಸ್ತೆ ಸಂಪರ್ಕ ಇಲ್ಲದಂತಾಗಿದೆ. ಅಲ್ಲದೇ, ಮಡಿಕೇರಿಯ ಬೊಟ್ಲಪ್ಪ ಗ್ರಾಮದ ಬಳಿ ಭೂಕುಸಿತವಾಗಿದ್ದು,ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ.
ಇನ್ನು ಮಲೆನಾಡಿನಲ್ಲೂ ಮಳೆ ಅಬ್ಬರ ಹೆಚ್ಚಾಗಿದ್ದು, ದ.ಕ-ಚಿಕ್ಕಮಗಳೂರಿಗೆ ರಸ್ತೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಭೂ ಕುಸಿತ ಉಂಟಾಗಿದೆ. ಇನ್ನು ಮೂಡಿಗೆರೆಯ ಕಿರಗುಂದ ಗ್ರಾಮದಲ್ಲಿ ಪ್ರವಾಹದಿಂದ ಶುಂಠಿ ಬೆಳೆ ನಾಶವಾಗಿದೆ. ಶೃಂಗೇರಿ,ಕಿಗ್ಗಾ ಭಾಗದಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, ನದಿ ತಟದ ಮನೆಗಳಿಗೆ ನೀರು ನುಗ್ಗಿದೆ.
ದಾವಣಗೆರೆಯ ಹೊನ್ನಾಳಿ ಪಟ್ಟಣದಲ್ಲಿ ಮಳೆ ನೀರು ಮನೆಯೊಳಗೆ ನುಗ್ಗಿದೆ. ನದಿಯ ನೀರು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಶಿವಮೊಗ್ಗದಲ್ಲಿ ಕೆರೆ,ಹಳ್ಳಕೊಳ್ಳಗಳು ತುಂಬಿ ಜಮೀನುಗಳು ಮುಳುಗಿವೆ. ರಾಯಚೂರು,ಕೊಪ್ಪಳ,ಬೆಳಗಾವಿ ಭಾಗದಲ್ಲಿಯೂ ಹೆಚ್ಚು ಮಳೆಯಾಗಿದ್ದು,ಜಲಾಶಯಗಳಿಂದ ನೀರು ಹೊರಬಿಡಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss