ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದಲ್ಲಿ 2 ಕೋಟಿ ವ್ಯಾಕ್ಸಿನ್ ವಿತರಣೆ: ದಕ್ಷಿಣ ಭಾರತದಲ್ಲಿ ಕರ್ನಾಟಕ ನಂಬರ್ 1

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಲಸಿಕೆ ವಿತರಣೆಯಲ್ಲಿ ಕರ್ನಾಟಕ ರಾಜ್ಯ ದಾಖಲೆ ನಿರ್ಮಿಸಿದ್ದು, ಇಲ್ಲಿಯವರೆಗೆ ಬರೋಬ್ಬರಿ 2 ಕೋಟಿ ವ್ಯಾಕ್ಸಿನ್ ವಿತರಣೆ ಮಾಡಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ ಡಾ. ಕೆ. ಸುಧಾಕರ್, ಕರ್ನಾಟಕ ಇಂದು 2 ಕೋಟಿ ವ್ಯಾಕ್ಸಿನ್ ವಿತರಣೆ ಮುಗಿಸಿದೆ. ಲಸಿಕೆ ವಿತರಣೆಯಲ್ಲಿ ಕರ್ನಾಟಕ ದಕ್ಷಿಣ ಭಾರತದಲ್ಲಿ No.1 ರಾಜ್ಯವಾಗಿದೆ. ಈ ವರ್ಷದ ಡಿಸೆಂಬರ್ 31ರ ಒಳಗೆ ಕರ್ನಾಟಕದ ಎಲ್ಲ ವಯಸ್ಕರಿಗೂ ವ್ಯಾಕ್ಸಿನ್ ಹಾಕುವ ಗುರಿಗೆ ನಾವು ಬದ್ಧರಾಗಿದ್ದೇವೆ. ಧನ್ಯವಾದಗಳು ನರೇಂದ್ರ ಮೋದಿಜಿ ಎಂದು ಟ್ವೀಟ್ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss